ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಉದ್ಘಾಟನಾ ಸಮಾರಂಭ ಮತ್ತು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ

ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಉದ್ಘಾಟನಾ ಸಮಾರಂಭ ಮತ್ತು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವು ದಿನಾಂಕ. 10-10-2018 ಬುಧವಾರದಂದು ಗಂಗಾವತಿಯಲ್ಲಿ ನಡೆಯಲಿದೆ. ಕೊಪ್ಪಳ ಗವಿಮಠದ ಶ್ರೀ ಮ ನಿ ಪ್ರ ಸ್ವ ಜಗದ್ಗುರು ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವ ಆರ್ ಶಂಕರ್, ಕೊಪ್ಪಳ ಸಂಸದರಾದ ಶ್ರೀ ಕರಡಿ ಸಂಗಣ್ಣನವರು, ಕೊಪ್ಪಳ ಜಿಲ್ಲೆಯ ಶಾಸಕರುಗಳಾದ ಪರಣ್ಣ ಮುನವಳ್ಳಿ, ರಾಘವೇಂದ್ರ ಹಿಟ್ನಾಳ, ಆಮರೇಗೌಡ ಪಾಟೀಲ ಬಯ್ಯಾಪೂರ, ಹಾಲಪ್ಪ ಆಚಾರ್, ಬಸವರಾಜ ದಡೇಸ್ಗೂರು, ಬಸವರಾಜ ಪಾಟೀಲ ಇಟಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರ್ ಹಿಟ್ನಾಳ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ, ಎಲ್ಲ ಬಿಆರ್ ಸಿ, ಸಿಆರ್ ಸಿ, ಜಿಲ್ಲೆಯ ಎಲ್ಲ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರುಗಳು, ಮತ್ತು ಶಿಕ್ಷಣ ಇಲಾಖೆಯ ಎಲ್ಲಾ ವರ್ಗದ ನೌಕರರು, ಜಿಲ್ಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಜಿಲ್ಲೆಯಲ್ಲಿನ ಎಲ್ಲಾ ಅತಿಥಿ ಶಿಕ್ಷಕರು, ಶಿಕ್ಷಣ ಪ್ರೇಮಿಗಳು, ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

#ಮೈಲಾರಗೌಡ ಗುಡ್ಲಾನೂರ
ಓಜನಹಳ್ಳಿ-ಕೊಪ್ಪಳ.
ಅಧ್ಯಕ್ಷರು,
ಕೊಪ್ಪಳ ತಾಲ್ಲೂಕು ಅತಿಥಿ ಶಿಕ್ಷಕರ ಸಂಘ.

Leave a Reply

Your email address will not be published. Required fields are marked *