ಪಟ್ಟಣದ ವಿವಿಧ ಬಡಾವಣೆಯ ಮುಖಂಡರು ಕಾಂಗ್ರೇಸ್ ಸೇರ್ಪಡೆ

ಕೆಂಭಾವಿ: ಈ ಭಾಗದ ನೀರಾವರಿ ಸೌಲಭ್ಯಕ್ಕಾಗಿ ಸರ್ಕಾರ ಸಾವಿರಾರು ಕೋಟಿ ಖರ್ಚುಮಾಡುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು. ಪಟ್ಟಣದ ಯುತ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಬಿಜೆಪಿ, ಜೆಡಿಎಸ್ ಪಟ್ಟಣದ ವಿವಿಧ ಬಡಾವಣೆಯ ಮುಖಂಡರು ಮತ್ತು ಕಾರ್ಯಕರ್ತರನ್ನು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡು ಮಾತನಾಡಿದರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಯೋಜನೆಗಳನ್ನು ಮೆಚ್ಚಿ ಹೆಚ್ಚನ ಜನ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದ ಅವರು ಬುದಿಹಾಳ-ಪಿರಾಪುರ ಏತನೀರಾವರಿ ಯೋಜಯಲ್ಲಿ ಮತಕ್ಷೇತ್ರದ 12 ಗ್ರಾಮಗಳಿಗೆ ನೀರಾವರಿ ಸೌಲಭ್ಯ ಸಿಗಲಿದ್ದು, ಇದು ರೈತರ ಹೋರಾಟಕ್ಕೆ ಸರ್ಕಾರ ಸ್ಪಂದಿಸುವ ಮೂಲಕ ರೈತ ಕಾಳಜಿಯನ್ನು ತೋಸಿದೆ. ಕಾರ್ಯಕರ್ತರು ಸರ್ಕಾರ ಸಾಧನೆಗಳನ್ನು ಪ್ರತಿ ಮನೆಮನೆಗೆ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಹುಲಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗನಗೌಡ ಮಾಲಿ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ ಪಾಟೀಲ, ವಾಮನರಾವ ದೇಶಪಾಂಡೆ, ಮಲ್ಲಣ್ಣ ಹೆಗ್ಗೇರಿ, ರಹಿಮನ್ ಪಟೇಲ, ಬಸವರಾಜ ತಳ್ಳಳ್ಳಿ ಇದ್ದರು.
 

Comment

Related News